ದೆಹಲಿಯ ವಿಜ್ಞಾನ ಭವನದಲ್ಲಿ ಬುಧವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಘೋಷಿಸಿದರು. ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ ಎಪ್ರಿಲ್ 13ರಂದು ಅಧಿಸೂಚನೆ ಪ್ರಕಟಗೊಳ್ಳಲಿದೆ ಎಪ್ರಿಲ್ 20ರಂದು ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾಗಿದ್ದು ಏಪ್ರಿಲ್ 21ರಂದು ನಾಮಪತ್ರಗಳ ಪರಿಶೀಲನೆ ನಡೆಯುತ್ತದೆ ಏಪ್ರಿಲ್ 24ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ಮೇ 10 ಬುಧವಾರದಂದು. 224 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು ಮೇ 13ರ ಶನಿವಾರ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ15 ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ

ಸಿಎಂ ಆಫೀಸಿಂದ ಎರಡು ಕಾರುಗಳನ್ನು ವಾಪಸ್ ಪಡೆಯಲಾಗಿದೆ
ಚುನಾವಣಾ ನೀತಿ ಸಂಹಿತೆ ಇಂದೇ ಜಾರಿಗೊಳಿಸಲಾಗಿದೆ, ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ನಿವಾಸದಿಂದ ಎರಡು ಸರ್ಕಾರಿ ಕಾರುಗಳನ್ನು ವಾಪಸ್ ತೆಗೆದುಕೊಳ್ಳಲಾಗಿದೆ.
ಚುನಾವಣೆ ದಿನಾಂಕ ಘೋಷಣೆ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ನಿವಾಸದಲ್ಲಿ ಸಭೆ ಕರೆಯಲಾಗಿದೆ.
ರಾಜ್ಯ ವಿಧಾನಸಭಾ ಚುನಾವಣೆ ಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ಅವರ ನಿವಾಸದಲ್ಲಿ ಹೈ ವೋಲ್ಟೇಜ್ ಸಭೆ ನಡೆಯಲಿದೆ. ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧಪಟ್ಟ ಮಹತ್ವದ ಚರ್ಚೆ ನಡೆಯುವ ಸಾಧ್ಯತೆ ಇದೆ. ಬೆಂಗಳೂರಿನ ರೇಸ್ ಕೋರ್ ರಸ್ತೆಯಲ್ಲಿರುವ ಸಿಎಂ ನಿವಾಸದಲ್ಲಿ ಸಭೆ ನಡೆಯಲಿದೆ.
ಇಂದಿನಿಂದ ನೀತಿ ಸಂಹಿತೆ ಜಾರಿ
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಈ ತಕ್ಷಣ ಅಂದರೆ ಇಂದಿನಿಂದಲೇ ನೀತಿ ಸಹಿತ ಜಾರಿಯಾಗಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಸಚಿವರು ಸರ್ಕಾರಿ ಸೌಲಭ್ಯಗಳನ್ನು ಬಳಸುವಂತಿಲ್ಲ. ಸರ್ಕಾರಿ ವಾಹನ ಸೇರಿ ಇತರೆ ಸವಲತ್ತುಗಳನ್ನು ಅವರು ಬಳಸುವಂತಿಲ್ಲ. ಯಾವುದೇ ಸರ್ಕಾರದ ಹೊಸ ಯೋಜನೆ ಘೋಷಣೆ ಮಾಡುವಂತಿಲ್ಲ ಮತ್ತು ಯಾವುದೇ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತಿಲ್ಲ ಆದರೆ ಸಿಎಂ ಸೇರಿ ಕೆಲವು ಸಚಿವರಿಗೆ ಮತ್ತು ಶಾಸಕರಿಗೆ ಎಂದಿನಂತೆ ಭದ್ರತೆ ಇರುತ್ತೆ ಎಸ್ಕಾರ್ಟ್ ಸೇರಿ ಎಲ್ಲಾ ರೀತಿಯ ಭದ್ರತೆ ಮುಂದುವರೆಯಲಿದೆ.
ಇದೇ ಮೊದಲ ಬಾರಿಗೆ ಮತದಾನ ಮಾಡುವ 18ರಿಂದ 19 ವಯಸ್ಸಿನ ಮತದಾರ ಸಂಖ್ಯೆ 9,17,241ರಷ್ಟಿದೆ ರಾಜ್ಯದಲ್ಲಿ ಒಟ್ಟು 5.55 ಲಕ್ಷ ವಿಕಲಚೇತನ ಮತದಾರರು ಇದ್ದಾರೆ. ಜೇನು ಕುರುಬ ಕಾಡು ಕುರುಬ ಮತದಾರರಿಗೆ ಪ್ರತ್ಯೇಕ ಭೂತ ವ್ಯವಸ್ಥೆ ಮಾಡಲಾಗಿದೆ.

58282 ಮತಗಟ್ಟೆಗಳ ಸ್ಥಾಪನೆಯಾಗಿದೆ.
ರಾಜ್ಯದಲ್ಲಿ ಒಟ್ಟು 58282 ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ ನಗರ ಪ್ರದೇಶಗಳಲ್ಲಿ 24,063 ಗ್ರಾಮಾಂತರ ಪ್ರದೇಶಗಳಲ್ಲಿ 34,219 ಮತಗಟ್ಟೆ ಮತ್ತು 1,320 ಮಹಿಳಾ ಸಿಬ್ಬಂದಿ ನಿರ್ವಹಿಸುವ ಮತಗಟ್ಟೆಗಳಿವೆ. 724 ಕ್ಷೇತ್ರಗಳಲ್ಲಿ ತಲಾ ಒಂದು ಯುವ ಮತಗಟ್ಟೆಗಳ ಸ್ಥಾಪನೆ
ಮಾಡಲಾಗುವುದು.
ರಾಜ್ಯದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.
ರಾಜ್ಯದ 724 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ ಏಪ್ರಿಲ್ 13ರಂದು ಅಧಿಸೂಚನೆ ಪ್ರಕಟಗೊಳ್ಳಲಿದೆ ಎಪ್ರಿಲ್ 20ರಂದು ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾಗಿದ್ದು ಏಪ್ರಿಲ್ 21ರಂದು ನಾಮಪತ್ರಗಳ ಪರಿಶೀಲನೆ ನಡೆಯುತ್ತದೆ 24ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನ ಮೇ 10 ಬುಧವಾರದಂದು 254 ಕ್ಷೇತ್ರದಲ್ಲಿ ಮತದಾನ ನಡೆಯಲಿದ್ದು ಮೇ 13ರ ಶನಿವಾರ ಫಲಿತಾಂಶ ಪ್ರಕಟಗೊಳ್ಳಲಿದೆ ಮೇ 15ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಲಿದೆ.
ಕರ್ನಾಟಕದಲ್ಲಿ ಮತದಾರರ ಸಂಖ್ಯೆ ಕರ್ನಾಟಕದಲ್ಲಿ ಒಟ್ಟು ಐದು ಕೋಟಿ 21 ಲಕ್ಷ ಮತದಾರರು ಇದ್ದಾರೆ.
ಈ ಪೈಕಿ 2,62,42,561 ಪುರುಷ ಮತದಾರರು ಮತ್ತು 2,59,26,319 ಮಹಿಳಾ ಮತದಾರರಿದ್ದಾರೆ. 4699 ತೃತೀಯ ಲಿಂಗಿ ಮತದಾರರು ಇದ್ದು 12.15 ಲಕ್ಷ ಯುವ ಮತದಾರರಿದ್ದಾರೆ ಇದೇ ಮೊದಲ ಬಾರಿಗೆ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ನೀಡಲಾಗಿದೆ.
ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆಗೆ ಆಯೋಗ ಸಿದ್ದವಿದೆ.
ದೆಹಲಿಯ ವಿಜ್ಞಾನ ಭವನದಲ್ಲಿ ಬುಧವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜು ಕುಮಾರ್ 2023 ರ ಒಳಗೆ ಹೊಸ ಸರ್ಕಾರ ರಚನೆಯಾಗಬೇಕು ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆಗೆ ಆಯೋಗ ಸಿದ್ದವಿದೆ ಮೇ 24ಕ್ಕೆ 15ನೇ ವಿಧಾನಸಭೆಯ ಅವಧಿ ಮುಕ್ತಾಯವಾಗಲಿದೆ ಕರ್ನಾಟಕದಲ್ಲಿ ಒಟ್ಟು ಐದು ಕೋಟಿ 21 ಲಕ್ಷ ಮತದಾರರು ಇದ್ದಾರೆ ಎಂದು ಹೇಳಿದ್ದಾರೆ.